Mysore
21
overcast clouds

Social Media

ಶನಿವಾರ, 03 ಜನವರಿ 2026
Light
Dark

ಮಾಜಿ ಶಾಸಕ ಸಿಟಿ ರವಿ ಪೊಲೀಸ್‌ ವಶಕ್ಕೆ!

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ನಡುವೆ ಇಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ‘ನನ್ನ ಕೂಡ ಬಂಧಿಸಿ’ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.

ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!