Mysore
22
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ದತ್ತಪೀಠದ ಗೋರಿ ಧ್ವಂಸ ಪ್ರಕರಣಕ್ಕೆ ಮರುಜೀವ!

ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್​​ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್‌ಗೆ ಮರುಜೀವ ನೀಡಿದ್ದಾರೆ.

ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.

ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್​ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ‌

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!