Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಲೋಕಸಭೆ ಚುನಾವಣೆಯಲ್ಲಿ ಗೆಲವು ಖಚಿತಪಡಿಸಿಕೊಳ್ಳಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು (ಗುರುವಾರ) ಕರೆ ನೀಡಿದ್ದಾರೆ.

ಇಂದು ದೇಶಾದ್ಯಂತ ಪಕ್ಷದ ಮುಖಂಡರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಕಳೆದ ೧೦ ವರ್ಷಗಳ ತನ್ನ ವೈಫಲ್ಯಗಳನ್ನು ಮರೆಮಾಚಲಿಕ್ಕೆ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ. ಪ್ರತಿಯೊಂದು ವಿಷಯದಲ್ಲೂ ಕಾಂಗ್ರೆಸ್‌ ಪಕ್ಷವನ್ನು ಉದ್ದೇಶಪೂರ್ವಕಾಗಿ ಎಳೆದು ತರುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲಾ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಅಭಿಪ್ರಯಾಪಟ್ಟಿದ್ದಾರೆ.

ನಾವು ಒಗ್ಗಟ್ಟಾಗಿ ಜನರ ಮುಂದೆ ಬಿಜೆಪಿಯ ಸುಳ್ಳು, ವಂಚನೆ ಮತ್ತು ತಳಮಟ್ಟದ ಸಮಸ್ಯೆಗಳನ್ನು ಪ್ರಸ್ತಾಪಿಸಿ ತಕ್ಕ ಪ್ರತ್ಯುತ್ತರ ನೀಡಬೇಕಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಇದೇ ವೇಳೆ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ ಕಾಂಗ್ರೆಸ್ ಅಧ್ಯಕ್ಷರು, ಮಣಿಪುರದಿಂದ ಮಹಾರಾಷ್ಟ್ರದವರೆಗೆ ಅವರ ಭಾರತ್ ನ್ಯಾಯ್ ಯಾತ್ರೆಯು ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರಲಿದೆ ಎಂದು ಅವರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ