Mysore
21
clear sky

Social Media

ಗುರುವಾರ, 20 ಆಗಸ್ಟ್ 2026
Light
Dark

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಹೊಸ ಪ್ರಕರಣ ಪತ್ತೆ, 4 ಸಾವು

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 298 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 229 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240 ಇದೆ.

ಕೊನೆಯ 24 ಗಂಟೆಗಳಲ್ಲಿ 7791 ಟೆಸ್ಟ್‌ಗಳು ನಡೆದಿವೆ, 6900 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 891 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.82% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 60 ವರ್ಷದ ಮಹಿಳೆ, ಬೆಂಗಳೂರಿನಲ್ಲಿ 82 ವರ್ಷದ & 64 ವರ್ಷದ ಹಾಗೂ ಧಾರವಾಡದಲ್ಲಿ 63 ವರ್ಷದ ಮೃತಪಟ್ಟಿದ್ದಾರೆ‌.

ಒಟ್ಟು 1240 ಸಕ್ರಿಯ ಪ್ರಕರಣಗಳ ಪೈಕಿ 1168 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 72 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 51 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 9 ಸೋಂಕಿತರು ಆಮ್ಲಜನಕ ಸಪೋರ್ಟ್‌ ಐಸೋಲೇಷನ್‌ ಬೆಡ್‌ನಲ್ಲಿದ್ದಾರೆ, 9 ಮಂದಿ ಐಸಿಯುನಲ್ಲಿದ್ದಾರೆ ಹಾಗೂ 3 ಸೋಂಕಿತರು ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 18, ಮಂಡ್ಯದಲ್ಲಿ 11, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 8 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 86, ಮಂಡ್ಯದಲ್ಲಿ 27, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 17 ಸಕ್ರಿಯ ಪ್ರಕರಣಗಳಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!