Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್‌ ಬೆದರಿಕೆ!

ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ.

ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬೆದರಿಕೆ ಇ-ಮೇಲ್ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ