Mysore
30
clear sky

Social Media

ಮಂಗಳವಾರ, 11 ಮಾರ್ಚ್ 2025
Light
Dark

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಇದೀಗ ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿ, ಶಕ್ತಿ ಯೋಜನೆ ಜಾರಿಯಾಗಿ ಖಾಸಗಿ ಬಸ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ