Mysore
28
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಸೋಮಣ್ಣ ಅವರ ಸಮಸ್ಯೆ ಏನೆ ಇರಲಿ ಬಗೆಹರಿಸುತ್ತೇನೆ: ಪ್ರಹಲ್ಲಾದ್‌ ಜೋಶಿ

ಹುಬ್ಬಳ್ಳಿ : ಸ್ವಪಕ್ಷದ ವಿರುದ್ಧವೇ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಆಗಾಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ಸ್ವಪಕ್ಷದ ವಿರುದ್ಧ ಅವರು ತಮ್ಮ ಅಸಮಾಧಾನ ಹೊರಹಾಕಿದ್ದು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ವಿ. ಸೋಮಣ್ಣ ಅವರ ಯಾವುದೇ ಸಮಸ್ಯೆ ಇದ್ದರೂ ಸರಿ ಮಾಡುತ್ತೇನೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ವಿರುದ್ಧ ಸಚಿವ ಸೋಮಣ್ಣ ಅಸಮಾಧಾನ ವಿಚಾರ ಸೋಮಣ್ಣ ನಮ್ಮ ಜೊತೆ ಮಾತನಾಡಿದ್ದಾರೆ.

ದೆಹಲಿಗೆ ಬರುವುದಾಗಿ ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಏನೇ ಸಮಸ್ಯೆ ಇದ್ದರೂ ಸರಿ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದರು.

ಅಲ್ಲದೆ ಪುರಾತತ್ವ ಇಲಾಖೆಯ ಮ್ಯೂಸಿಯಂ ಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಸಿದಂತೆ ಮಾತನಾಡಿದ ಅವರು, ಇದರ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮೇಲ್ ಹಾಕಿದವರು ಯಾವ ಜಾತಿಯವರೆಂದು ನೋಡಬಾರದು. ಯಾರೇ ಬೆದರಿಕೆ ಕರೆ ಮಾಡಿದರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!