Mysore
24
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಎನ್‌ಪಿಎಸ್‌ ರದ್ದುಗೊಳಿಸಿ ಒಪಿಎಸ್‌ ಜಾರಿ :ಸಿದ್ದರಾಮಯ್ಯ ಮಹತ್ವದ ನಿರ್ಧಾರ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ  ಇಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು.

ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.

ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!