Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮೃತ ಹೆಣ್ಣು ಮಕ್ಕಳ ವಾರಸುದಾರರಿಗೆ ಆಕೆಯ ಆಸ್ತಿ ಮೇಲೆ ಹಕ್ಕಿದೆ : ಹೈಕೋರ್ಟ್‌ ಆದೇಶ

ಬೆಂಗಳೂರು: 2005ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ಹೆಣ್ಣುಮಕ್ಕಳು ತೀರಿಕೊಂಡಿದ್ದರೂ ಸಹ, ಮಗಳ ಕಾನೂನುಬದ್ಧ ವಾರಸುದಾರರು ಕುಟುಂಬದ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಚನ್ನಬಸಪ್ಪ ಹೊಸ್ಮನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ನಿವಾಸಿ ಚನ್ನಬಸಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಸಚಿನ್ ಶಂಕರ್ ಮಗ್ದಮ್ ಅವರಿದ್ದ ಪೀಠ ಮೃತ ಹೆಣ್ಣು ಮಕ್ಕಳ ಕಾನೂನು ಉತ್ತರಾಧಿಕಾರಿಗಳು ಆಸ್ತಿಯಲ್ಲಿ ಸಮಾನ ಪಾಲು ಪಡೆಯಹುದು ಎಂದು ಆದೇಶಿಸಿದೆ.

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ನಿವಾಸಿ ಚನ್ನಬಸಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ವಿನೀತಾ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠವು ಈ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಗಮನಿಸಿದರು.

“ಈ ತೀರ್ಪು ಲಿಂಗ ಸಮಾನತೆಯನ್ನು ಒತ್ತಿಹೇಳುತ್ತದೆ ಮತ್ತು ಮಗಳು ಯಾವಾಗ ನಿಧನರಾದರು ಎಂಬುದನ್ನು ಲೆಕ್ಕಿಸದೆ ಹೆಣ್ಣುಮಕ್ಕಳು ಮತ್ತು ಅವರ ವಾರಸುದಾರರು ಪಿತ್ರಾರ್ಜಿತ ಆಸ್ತಿಯಲ್ಲಿ ತಮ್ಮ ಸರಿಯಾದ ಪಾಲನ್ನು ಪಡೆಯುವುದನ್ನು ಖಚಿತಪಡಿಸುತ್ತದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ