ಮೈಸೂರು: ಕೆಆರ್ ಎಸ್ ಆಣೆಕಟ್ಟಿನ ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕೆಆರ್‌ಎಸ್ ಆಣೆಕಟ್ಟಿನ ಸುತ್ತಾಮುತ್ತಾ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಸಿಜೆ ಪ್ರಸನ್ನ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಕೃಷ್ಣರಾಜಸಾಗರ ಡ್ಯಾಮ್ ಈಗಾಗಲೇ ಸಂಕಷ್ಟದಲ್ಲಿದೆ, ಕೆ ಆರ್ ಎಸ್ ಡ್ಯಾಂ ಬಳಿ ಹಲವು ಭಾರಿ ದೊಡ್ಡ ಶಬ್ಬಗಳು ಕೇಳಿ ಬಂದಿದೆ. ಆಣೆಕಟ್ಟಿನ ಬಳಿ ಗಣಿಗಾರಿಕೆ ನಡೆಸಿದರೆ ಅಪಾಯವಾಗುವ ಸಂಭವವಿದೆ ಎಂದು ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಕೃಷ್ಣ ರಾಜ ಸಾಗರ ಅಣೆಕಟ್ಟನ್ನು 1924 ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಜೀವ ನೀಡುವ ನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಅತ್ಯಂತ ಫಲವತ್ತಾದ ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ.