Mysore
24
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ನಟ ಯಶ್ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ

ಗದಗ: ಇಂದು (ಜನವರಿ ೮) ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವಾಗಿದೆ. ಯಶ್‌ ಹುಟ್ಟು ಹಬ್ಬದ ಪ್ರಯುಕ್ತ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದು, ಯಶ್‌ ಜನ್ಮದಿನದಂದೇ ಆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ಈ ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನರು ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಅವರ ಗ್ರಾಮದಲ್ಲಿ ಸಾಮೂಹಿಕವಾಗಿ ನೆರವೇರಿಸಲಾಯಿತು.

ಮೃತರ ಕುಟುಂಬದವರು ಬಡವರಾಗಿದ್ದು, ಕೂಲಿಯಿಂದ ಜೀವನ ಸಾಗಿಸುತ್ತಿದ್ದರು. ಈ ಬಗ್ಗೆ ವಿಷಾಧ ವ್ಯಕ್ತಪಡಿಸಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಷ್‌.ಕೆ ಪಾಟೀಲ್‌ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಮತ್ತು ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ