Mysore
29
scattered clouds

Social Media

ಬುಧವಾರ, 27 ಮೇ 2026
Light
Dark

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಜನವರಿ ೨೨ ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರಾಮಮಂದಿರ ನಿರ್ಮಾಣಕ್ಕೆ ನಾನು ಸಹಾ ದೇಣಿಗೆ ಕೊಟ್ಟಿದ್ದೇನೆ, ಆದರೆ ಅದು ನನ್ನ ವಯಕ್ತಿಕ ವಿಚಾರವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮದವರೊದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.

ಪ್ರತ್ಯೇಕವಾಗಿಯಾದರು ಸರಿ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್‌ ನಿರ್ಧರಿಸದರೇ ಅದಕ್ಕೂ ಬದ್ಧವಾಗಿರುತ್ತೇವೆ. ನಾವು ಹಿಂದುಗಳೇ ಅಲ್ಲವಾ, ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಮುಂದಿನ ದಿನ ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!