Mysore
23
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಜಲ್ಲಿಕಟ್ಟು ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ತಮಿಳುನಾಡಿನಲ್ಲಿ ಪೊಂಗಲ್‌ ಹಬ್ಬದಂದು ರಾಜಾದ್ಯಂತ ನಡೆಯುವ ‘ಜಲ್ಲಿಕಟ್ಟು’ ಕ್ರೀಡೆಗೆ ಅವಕಾಶ ನೀಡಲು ರಾಜ್ಯದ ಕಾನೂನಿನಲ್ಲಿ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ತನ್ನ 2023ರ ತೀರ್ಪಿನ ಪುನರ್ಪರಿಶೀಲನೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವುದನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿಕೊಂಡಿದೆ.

ಈ ಸಂಬಂಧ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಫ್ಟಿ ಅವರು ಮಾಡಿಕೊಂಡ ನಿವೇದನೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಗಮನಕ್ಕೆ ತೆಗೆದುಕೊಂಡಿತು.

ನ್ಯಾ.ಕೆ.ಎಂ.ಜೋಸೆಫ್ (ಈಗ ನಿವೃತ್ತ) ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕಳೆದ ವರ್ಷದ ಮೇ 18ರಂದು ಜಲ್ಲಿಕಟ್ಟು,ಎತ್ತಿನ ಗಾಡಿಗಳ ಸ್ಪರ್ಧೆ ಮತ್ತು ಕಂಬಳಕ್ಕೆ ಅವಕಾಶ ಕಲ್ಪಿಸಿದ್ದ ತಮಿಳುನಾಡು,ಮಹಾರಾಷ್ಟ್ರ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆಗಳ ಸಿಂಧುತ್ವವನ್ನು ಎತ್ತಿಹಿಡಿದು ಸರ್ವಾನುಮತದ ತೀರ್ಪನ್ನು ನೀಡಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!