Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕೆಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರ ಮನೆಗಳ ಮೇಲೆ ದಿಢೀರ್‌ ದಾಳಿ ಮಾಡಿದ್ದಾರೆ.

ಮಂಡ್ಯ,  ಬೆಂಗಳೂರು ಮತ್ತು ಬಳ್ಳಾರಿಯಲ್ಲಿನ ವಿವಿಧ ಇಲಾಖಾ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಯುಕ್ತ, ಶೋಧಕಾರ್ಯ ನಡೆಸಿದ್ದಾರೆ.

ಕುಂದಣ ಪಿಡಿಒ ಅವರ ಬೆಂಗಳೂರಿನ ಮೂರು ಮನೆಗಳು, ದಾಬಸ್‌ಪೇಟೆ ಮತ್ತು ತುಮಕೂರಿನಲ್ಲಿರುವ ಅವರ ಮನೆಗಳ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮಂಡ್ಯ ಜಿಲ್ಲೆಯ ಮೂರು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು ಬಿಬಿಎಂಪಿ ಅಧಿಕಾರಿ ಮಂಜೇಶ್‌ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ರೇಡ್‌ ನಡೆದಿದೆ.

ಬಿಬಿಎಂಪಿ ಅಧಕಾರಿ ಮಂಜೇಶ ಅವರ ಸಂಬಂಧಿಕರಾದ ಹಲಗೂರು ಗ್ರಾ.ಪಂ. ಸದಸ್ಯ ಸುರೇಂದ್ರ ಎಂಬುವವರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಲಗೂರು ಪಟ್ಟಣದ ಜೆಪಿಎಂ ಬಡಾವಣೆಯಲ್ಲಿನ ಸುರೇಂದ್ರ ಅವರಿಗೆ ಸೇರಿದ ಮನೆ ಹಾಗೂ ಸುರೇಂದ್ರ ಅವರ ಸ್ವಗ್ರಾಮ ಗುಂಡಾಪುರ ಗ್ರಾಮದಲ್ಲಿ ಮನೆಗಳ ಮೇಲೂ ದಾಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದ್ದು, ಅವರ ಮೆನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆಯಿಂದಲೇ ಲೋಕಾಯುಕ್ತ ದಾಳಿ ಮಾಡಿ ಅಗತ್ಯ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!