Mysore
26
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ರೋಹಿಣಿ ಸಿಂಧೂರಿ-ಡಿ. ರೂಪಾ ಪ್ರಕರಣ: ಫೆ.16ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್​ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್​​ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು.

ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು.

ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!