Mysore
28
broken clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಇಲ್ಲ: ಬಿಎಸ್​ಪಿ ವರಿಷ್ಠೆ ಮಾಯಾವತಿ

ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್​ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್​ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.

ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್‌ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ತನ್ನ ಚಾಣಾಕ್ಷ ರಾಜಕೀಯ ತಂತ್ರಗಳಿಗೆ ಹೆಸರುವಾಸಿಯಾಗಿರುವ ಮಾಯಾವತಿ, ಲೋಕಸಭಾ ಚುನಾವಣೆಯ ಸ್ವತಂತ್ರ ನಿಲುವನ್ನು ತಿಳಿಸಲು ತಮ್ಮ ಜನ್ಮದಿನವನ್ನೇ ಆಯ್ಕೆಮಾಡಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ತಮ್ಮ ನಿಲುವನ್ನು ತಿಳಿಸಿದ್ದಾರೆ.

ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಕಷ್ಟವಾಗಲಿದೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು ವರ್ಗಾವಣೆಯಾಗುತ್ತವೆ. ನಮ್ಮ ಮತಗಳ ಶೇಕಡಾವಾರು ಪ್ರಮಾಣವೂ ಕಡಿಮೆಯಾಗುತ್ತದೆ ಮತ್ತು ಇತರೆ ಪಕ್ಷಗಳಿಗೆ ಲಾಭವಾಗುತ್ತದೆ. ನಮ್ಮ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಮೂಲಕ ಉತ್ತಮ ಫಲಿತಾಂಶ ತರಲಿದೆ. ಮೈತ್ರಿ ಮಾಡಿಕೊಂಡರೆ ಬಿಎಸ್​ಪಿಯ ಸಂಪೂರ್ಣ ಮತವು ಮೈತ್ರಿ ಪಕ್ಷಕ್ಕೆ ಹೋಗುತ್ತದೆ ಎಂದಿದ್ದಾರೆ

ಚುನಾವಣೆ ಮುಗಿದ ಬಳಿಕ ಮೈತ್ರಿ ಬಗ್ಗೆ ಆಲೋಚನೆ ಮಾಡುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!