Mysore
21
overcast clouds
Light
Dark

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ಗೆ ಜಾಮೀನು

ಡಿಸೆಂಬರ್‌ 24ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಹೋರಾಟಗಾರ್ತಿ ನಜ್ಮಾ ನಝೀರ್‌ ಎಂಬುವವರು ಕಲ್ಲಡ್ಕ ಪ್ರಭಾಕರ್‌ ಭಟ್‌ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಧರ್ಮಗಳ ನಡುವೆ ಗಲಭೆ ಹಾಗೂ ಅಶಾಂತಿ ಸೃಷ್ಠಿಸುವ ಹಾಗೆ ಮಾತಾನಾಡಿ ನ್ಯಾಯಾಂಗ ವ್ಯವಸ್ಥೆಯನ್ನೂ ಸಹ ಅಣಕಿಸಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಪ್ರಭಾಕರ್‌ ಭಟ್‌ ಎಫ್‌ಐಆರ್‌ ರದ್ದು ಮಾಡುವಂತೆ ಮನವಿ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಲ್ಲಡ್ಕ ಪ್ರಭಾಕರ್‌ ಭಟ್‌ಗೆ ಜಾಮೀನು ದೊರಕಿದೆ. ಶ್ರೀರಂಗಪಟ್ಟಣದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ( ಜನವರಿ 17 ) ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇಬ್ಬರು ಸ್ಥಳೀಯರ ಶ್ಯೂರಿಟಿ ಹಾಗೂ 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ