Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ

ರಾಜ್ಯದ ಪರಿಶಿಷ್ಟ ಜಾತಿ ಸಮಯದಾಯಕ್ಕೆ ಒಳ ಮೀಸಲಾತಿ ನೀಡಿ, ಅದಕ್ಕೆ ಸಂವಿಧಾನದ ಆರ್ಟಿಕಲ್‌ 341ರಲ್ಲಿ ತಿದ್ದುಪಡಿ ತಂದು ಖಂಡ (3)ನ್ನು ಸೇರಿಸಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಹೊಸ ಜನಗಣತಿ ಪ್ರಕಾರ ಮೀಸಲಾತಿಯಲ್ಲಿ ಪರಿಷ್ಕರಣೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಹಾಗೂ ಮೀಸಲಾತಿ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಡಲು ಕೇಂದ್ರಕ್ಕೆ ಮನವಿ ಮಾಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಂವಿಧಾನದ ಆರ್ಟಿಕಲ್‌ 341ಕ್ಕೆ ಖಂಡ 3ನ್ನು ಸೇರಿಸದೇ ಒಳ ಮೀಸಲಾತಿ ನೀಡುವುದು ಅಸಾಧ್ಯ. ಹೀಗಾಗಿ ಜನಸಂಖ್ಯೆಗೆ ಅನುಗುಣವಾಗಿ ತಿದ್ದುಪಡಿ ಮಾಡಿ ಒಳ ಮೀಸಲಾತಿ ಘೋಷಣೆ ಮಾಡಬೇಕು ಎಂದು ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!