Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಪಕ್ಷದ ಚಿಹ್ನೆ-ಲೆಟರ್‌ ಹೆಡ್‌ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್‌ ಆದೇಶ!

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ.

ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಕೋರ್ಟ್ ಆದೇಶ ನೀಡಿದ್ದು, ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಸಿಎಂ ಇಬ್ರಾಹಿಂ ಉಚ್ಚಾಟನೆ ಬಳಿಕ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ 8ನೇ ಸೆಪ್ಟೆಂಬರ್ 2022ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿತ್ತು. 2023ರ ನವೆಂಬರ್ 16ರಂದು 2023ರಂದು ಪಕ್ಷದಿಂದ ಉಚ್ಚಾಟಿಸಲಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!