Mysore
15
clear sky

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಚೀನಾದ ಶಾಲೆಯಲ್ಲಿ ಅಗ್ನಿ ಅವಘಡ :೧೩ ಮಕ್ಕಳು ಸಜೀವ ದಹನ!

ಬಿಜಿಂಗ್: ಚೀನಾದಲ್ಲಿ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹೆನಾನ್ ಪ್ರಾಂತ್ಯದ ಯನ್‌ಶನ್ಪು ಹಳ್ಳಿಯ ಯಿಂಗ್‌ಕೈ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಮೂರನೇ ತರಗತಿಯ 13 ಶಾಲಾ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಷಿನ್‌ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪೂರ್ವ ಚೀನಾದ ಚಾಂಗ್‌ಜೊವ್ ನಗರದ ಕೈಗಾರಿಕಾ ಘಟಕದ ಕಾರ್ಯಾಗಾರದಲ್ಲಿ ಸ್ಫೋಟದ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದೂ ಸಂಸ್ಥೆ ವರದಿ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!