Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವಿಷಾನಿಲ ಸೋರಿಕೆ : ಇಬ್ಬರು ಕಾರ್ಮಿಕರ ಸಾವು!

ಬೀದರ್‌ :  ಬೀದರ್‌ ಜಿಲ್ಲೆಯಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್‌ ತಯಾರಿಕಾ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ವಡ್ಡನಕೇರಾ ಗ್ರಾಮದ ಕುತುಬೋದ್ದೀನ್‌ (21) ಹಾಗೂ ಮಧ್ಯಪ್ರದೇಶದ ಮೂಲದ ಇಂದ್ರಜಿತ್‌ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ