ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರು ಅಪಘಾತಕ್ಕೀಡಾಗಿದ್ದು, ಈ ಘಟನೆಯಲ್ಲಿ ಮಮತಾ ಬ್ಯಾನರ್ಜಿ ತಲೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ಬರ್ಧಮಾನ್‌ನಿಂದ ಕೊಲ್ಕತ್ತಾಗೆ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಮೋಡ ಕವಿದ ವಾತಾವರಣವಿದ್ದ ಕಾರಣ ಮಮತಾ ಬ್ಯಾನರ್ಜಿ ರಸ್ತೆ ಮಾರ್ಗವಾಗಿ ಕೊಲ್ಕತ್ತಾಗೆ ಮರಳುತ್ತಿದ್ದರು. ಆದರೆ ರಸ್ತೆಯಲ್ಲಿ ಮಂಜಿನ ಪ್ರಮಾಣ ಹೆಚ್ಚಿದ್ದ ಕಾರಣ ರಸ್ತೆ ಸರಿಯಾಗಿ ಕಾಣದ ಕಾರಣ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಅಪಘಾತ ಸಂಭವಿಸಿದೆ. ಗಾಯಗೊಂಡ ಮಮತಾ ಬ್ಯಾನರ್ಜಿ ಅವರನ್ನು ಕೊಲ್ಕತ್ತಾಗೆ ಕರೆತರಲಾಗುತ್ತಿದೆ.





