Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಶೃಗೇರಿ ಶಂಕರ ಮಠಕ್ಕೆ ನೂತನ ಆಡಳಿತಾಧಿಕಾರಿ ನೇಮಕ!

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ.

ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು.

ಅವರನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ 1989ರಲ್ಲಿ ನೇಮಕ ಮಾಡಲಾಗಿತ್ತು.

ಸುಮಾರು 35 ವರ್ಷಗಳ ಕಾಲ ಡಾ. ವಿ ಆರ್ ಗೌರಿಶಂಕರ್ ಮಠದ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಇದೀಗ ವಿ.ಆರ್ ಗೌರಿಶಂಕರ್ ಅವರು ನೂತನ ಸಿಇಒ ಅವರಿಗೆ ಮುಖ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದು, ಶ್ರೀ ಶಾರದ ಪೀಠದ ನೂತನ ಸಿಇಒ ಮತ್ತು ಆಡಳಿತಾಧಿಕಾರಿ ಆಗಿ ಪಿ. ಎ. ಮುರಳಿ ಅವರು ಕಾರ್ಯನಿರ್ವಹಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!