Mysore
17
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಗಿಂತ ನೆಹರೂ ಕೊಡುಗೆ ದೊಡ್ಡದು: ಸುಧೀಂದ್ರ ಕುಲಕರ್ಣಿ

ಮುಂಬೈ: ಸಂವಿಧಾನಕ್ಕೆ ಪಂಡಿತ್ ಜವಾಹರಲಾಲ್ ನೆಹರೂ ಅವರ ಕೊಡುಗೆ ಡಾ. ಬಿ.ಆರ್ ಅಂಬೇಡ್ಕರ್ ಅವರಿಗಿಂತ ದೊಡ್ಡದು ಎಂದು ಸುಧೀಂದ್ರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ತಮ್ಮ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಎಂದು ರಾಜಕೀಯ ವಿಶ್ಲೇಷಕ ಸುಧೀಂದ್ರ ಕುಲಕರ್ಣಿ ಅವರು ಹೇಳಕೆ ನೀಡಿದ್ದು, ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಗೆ ಬದ್ಧವಾಗಿದ್ದು, ಕ್ಷಮೆಯಾಚಿಸುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನದ ರಚಿಸಿದವರು ಎಂದು ಭಾವಿಸಲಾಗಿದೆ. ಆದರೆ, ಈ ಬಗ್ಗೆ ಸಂಶೋಧನೆ ಮಾಡಿದ್ದು, ಇತಿಹಾಸದ ವಾಸ್ತವಾಂಶ ಪರಿಶೀಲಿಸಿದರೆ ಅದು ಸುಳ್ಳು ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಸುಧೀಂದ್ರ ಕುಲಕರ್ಣಿ ಬರೆದಿದ್ದ ಲೇಖನದ ಲಿಂಕ್ ಅನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ನಂತರ ಅದನ್ನು ಡಿಲೀಟ್ ಮಾಡಿದ್ದರು. ಲೇಖನದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಬಿಜೆಪಿ, ದಲಿತರು ಹಾಗೂ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಟೀಕಿಸಿದೆ.

https://x.com/ANI/status/1751184086037872956?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!