Mysore
27
overcast clouds

Social Media

ಸೋಮವಾರ, 15 ಜೂನ್ 2026
Light
Dark

ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ನಿತೀಶ್‌ ಕುಮಾರ್‌ ಫಸ್ಟ್ ರಿಯಾಕ್ಷನ್

ಪಾಟ್ನಾ: ನಮ್ಮ ಪಕ್ಷದ ನಾಯಕರ ಅಪೇಕ್ಷೆಯಂತೆ ರಾಜೀನಾಮೆ ಸಲ್ಲಿಸಿದ್ದೇನೆ. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿರ್ಗಮಿತ ಸಿಎಂ ನಿತೀಶ್ ಕುಮಾರ್‌ ಹೇಳಿದ್ದಾರೆ.

ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಬಳಿಕ ಬಿಹಾರದ ಪಾಟ್ನಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. INDIA ಒಕ್ಕೂಟದಿಂದಲೂ ಹೊರಗೆ ಬಂದಿದ್ದು, ಮಹಾಘಟಬಂಧನ್‌ನಿಂದಲೂ ಆಚೆ ಬಂದಿದ್ದೇನೆ ಎಂದು ರಾಜೀನಾಮೆ ನೀಡಿದ ಬಳಿಕ ಮಾತನಾಡಿದರು.

ಇಂಡಿಯಾ ಒಕ್ಕೂಟದಿಂದ ಹೊರಬಂದು ನಿತೀಶ್ ಕುಮಾರ್ ಎನ್‌ಡಿಎ (NDA) ತೆಕ್ಕೆಗೆ ಮರಳಿದ್ದಾರೆ. ಇನ್ನುಮುಂದೆ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಆಡಳಿತ ನಡೆಸಲಿದ್ದು, ಇಂದು ಸಂಜೆ ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು. ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!