Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಮೈಸೂರು: ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಹುಲಿ

ಮೈಸೂರು: ರಸ್ತೆ ದಾಟುತಿದ್ದ ಹುಲಿಗೆ ಕಾರೊಂದು ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ನಂಜನಗೂಡು ಹೆದ್ದಾರಿಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಮೈಸೂರು ನಗರದಲ್ಲಿ ತನ್ನ ಮೂರು ಮರಿಗಳೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಸುಮಾರು ಒಂದೂವರೆ ವರ್ಷದ ಅದೇ ಗಂಡು ಹುಲಿಯೇ ಅಪಘಾತದಲ್ಲಿ ಮರಣ ಹೊಂದಿದೆ ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಕುಮಾರ್ ಪುಷ್ಕರ್ ಶಂಕೆ ವ್ಯಕ್ತಪಡಿಸಿದ್ದಾರೆ.

ಕಾರೊಂದು ಹುಲಿಗೆ ಡಿಕ್ಕಿ ಹೊಡೆದ ಪರಿಣಾಮ ಹುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. ಈ ಘಟನೆಯ ನಂತರ ಒಂದೂವರೆ ವರ್ಷದ ಹುಲಿಯಲ್ಲಿ ಹೆದ್ದಾರಿಯ ಪೊದೆಗೆ ಎಸೆಯಲಾಯಿತು ಎಂದು ವರದಿಯಾಗಿದೆ, ಅಲ್ಲಿಂದ ಅರಣ್ಯ ಸಿಬ್ಬಂದಿ ಶವವನ್ನು ಹೊರತೆಗೆದಿದ್ದಾರೆ. ಅಪಘಾತದಲ್ಲಿ ಹುಲಿಗೆ ಡಿಕ್ಕಿ ಹೊಡೆದ ಕಾರು ಭಾಗಶಃ ಜಖಂಗೊಂಡಿದ್ದು, ವಶಕ್ಕೆ ಪಡೆಯಲಾಗಿದೆ. ಕಾರಿನಲ್ಲಿದ್ದವರನ್ನೂ ವಿಚಾರಣೆಗೆ ಒಳಪಡಿಸಿದ್ದು, ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಘಟನಾ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಡಾ.ಮಾಲತಿ ಪ್ರಿಯಾ, ಅರಣ್ಯಾಧಿಕಾರಿಗಳಾದ ಲಕ್ಷ್ಮೀನಾರಾಯಣ, ಸುರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!