Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕರ್ನಾಟಕ ಹೈಕೋರ್ಟ್​​ನ ಸಿಜೆಯಾಗಿ ಪಿಎಸ್ ದಿನೇಶ್ ಕುಮಾರ್ ನೇಮಕ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್​​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ ಅನುಮತಿ ನೀಡಿದೆ.

ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದಾರೆ.

ಜನವರಿ 19 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲೀಜಿಯಂ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಕುಮಾರ್ ಅವರನ್ನು ನೇಮಿಸಲು ಶಿಫಾರಸ್ಸು ಮಾಡಿತ್ತು. ಆಗಿನ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರಿಗೆ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ನೀಡಿದ ನಂತರ ತೆರವಾದ ಸ್ಥಾನಕ್ಕೆ ಕುಮಾರ್ ಅವರನ್ನು ಶಿಫಾರಸು ಮಾಡಲಾಗಿತ್ತು.

ನ್ಯಾಯಮೂರ್ತಿ ಕುಮಾರ್ ಅವರು ಫೆಬ್ರವರಿ 24 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ