Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುತ್ತೇನೆಂದು 2 ಲಕ್ಷ ಮೋಸ ಮಾಡಿದ ಡ್ರೋನ್ ಪ್ರತಾಪ್?

ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಎರಡು ಲಕ್ಷ ವಂಚಿಸಿದ್ದಾರೆ ಎಂದು ಚಂದನ್ ಕುಮಾರ್ ಎಂಬುವವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿಕೆ ದಯಾನಂದ ಅವರಿಗೆ ದೂರು ನೀಡಿದ್ದಾರೆ.

ಚಂದನ್ ಕುಮಾರ್ ತನ್ನ ಜತೆ ಡ್ರೋನ್ ಪ್ರತಾಪ್ ತನಗೆ ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪರಿಚಯವಿದೆ ಎಂದು ಹೇಳಿದ್ದರು ಎಂಬ ಆಡಿಯೊವೊಂದನ್ನೂ ಸಹ ಹಂಚಿಕೊಂಡಿದ್ದು, ಕುಮಾರಸ್ವಾಮಿ ಅವರ ಬಳಿ‌ ಮಾತನಾಡಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ