Mysore
23
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬಾಕಿ ಉಳಿಸಿಕೊಂಡ ಹಾಲು ಉತ್ಸಾಹ ಧನ ಬಿಡುಗಡೆಗೆ ಆಗ್ರಹ : ಬಿ.ವೈ.ವಿಜಯೇಂದ್ರ !

ಬೆಂಗಳೂರು : ರಾಜ್ಯ  ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು,  ಕೂಡಲೇ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು.

ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ.

ಜನ ಅಷ್ಟೇ ಅಲ್ಲ ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.

ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ