ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.
ವಿಶಾಖಪಟ್ಟಣಂನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 396 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದರು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 253 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. 143 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 255 ರನ್ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿತು. ತಂಡದ ಪರ ಶುಭ್ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಇಂಗ್ಲೆಂಡ್ಗೆ 399 ರನ್ಗಳ ಗೆಲುವಿನ ಗುರಿ ನೀಡಿತು.
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 4ನೇ ದಿನದಾಟದ ಎರಡನೇ ಸೆಷನ್ನಲ್ಲಿ 292 ರನ್ಗಳಿಗೆ ಆಲೌಟ್ ಆಗುವ ಮೂಲಕ 106 ರನ್ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಸ್ಕೋರ್ ವಿವರ:
ಭಾರತ ಇನ್ನಿಂಗ್ಸ್: 396 ಮತ್ತು 255
ಇಂಗ್ಲೆಂಡ್ ಇನ್ನಿಂಗ್ಸ್: 253 ಮತ್ತು 292
ಪಂದ್ಯ ಶ್ರೇಷ್ಠ: ಜಸ್‌ಪ್ರಿತ್ ಬುಮ್ರಾ
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ:
ಸ್ಥಳ: ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ
ದಿನಾಂಕ: ಫೆ.15 ರಿಂದ 19
ಲೈವ್: ಸ್ಪೋರ್ಟ್ಸ್ 18 ನೆಟ್ ವರ್ಕ್
ಲೈವ್ ಸ್ಟ್ರೀಮಿಂಗ್: ಜಿಯೋ ಸಿನಿಮಾ