Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಗುಂಡ್ಲುಪೇಟೆ: ಡಿಕೆ ಸುರೇಶ್‌ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಗುಂಡ್ಲುಪೇಟೆ: ದೇಶ ವಿಭಜನೆಯ ವಿವಾದಾತ್ಮಕ ಹೇಳಿಕೆ ನೀಡಿರುವ ಲೋಕಸಭಾ ಸದಸ್ಯ ಡಿ.ಕೆ ಸುರೇಶ್‌ ವಿರುದ್ಧ ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸೋಮವಾರ ಡಿ.ಕೆ ಸುರೇಶ್ ಪ್ರತಿಕೃತಿ ದಯಿಸಿ ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ದೇಶ ವಿಭಜನೆ ಎಂಬ ಪಿಡುಗು ಕಾಂಗ್ರೆಸ್  ಡಿಎನ್ಎ ದಲ್ಲೇ ಬಂದಿದೆ. ಸ್ವಾತಂತ್ರದ ದಿನದಿಂದಲೂ ದೇಶವನ್ನು ಹೊಡೆದು ಆಳುವ ನೀತಿಯನ್ನು ಕಾಂಗ್ರೆಸ್ ಮಾಡಿಕೊಂಡು ಬಂದಿದೆ.

ಇದರ ಮುಂದುವರೆದ ಭಾಗವಾಗಿ ಇಂದಿನ ಕಾಂಗ್ರೆಸ್ ನವರು ದೇಶ ಒಡೆಯುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಡಿ.ಕೆ ಸುರೇಶ್ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ನಾಯಕರುಗಳ ವರ್ತನೆಯು ಅದೇ ರೀತಿಯಾಗಿದೆ ಎಂದು ಕಿಡಿಕಾರಿದರು.

ಕೂಡಲೇ ಡಿ.ಕೆ ಸುರೇಶ್ ರವರನ್ನ ಸಂಸತ್ ಸದ್ಯಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಪ್ರತಿಭಟನೆ ನಡಸುತ್ತಾ ಗುಂಡ್ಲುಪೇಟೆ ತಾಲೂಕು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ