Mysore
21
overcast clouds

Social Media

ಶನಿವಾರ, 03 ಜನವರಿ 2026
Light
Dark

ಜೆ.ಎಸ್.ಎಸ್.ಕಾಲೇಜು ವಿದ್ಯಾರ್ಥಿನಿಗೆ ಮುಖ್ಯಮಂತ್ರಿಗಳಿಂದ ಪ್ರಶಸ್ತಿ

ಮೈಸೂರು: ರಾಜ್ಯ ಮಟ್ಟದ ಗಾಂಧಿ ಪ್ರಬಂಧ ಸ್ಪರ್ಧೆಯ ಪದವಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದ ಮೈಸೂರು ಜೆ.ಎಸ್.ಎಸ್.ಕಾಲೇಜಿನ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿನಿ ಕುಸುಮಾಬಾಯಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪತ್ರ ಹಾಗೂ ನಗದು 11 ಸಾವಿರ ರೂಗಳನ್ನು ವಿತರಿಸಿದರು.

ನಗರದ ಜೆ.ಎಸ್.ಎಸ್ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿನಿ ಕುಸುಮ ಬಾಯಿ ಮಾನ್ಯ ಮುಖ್ಯಮಂತ್ರಿ ಗಳಿಂದ ಪ್ರಶಸ್ಥಿ ಹಾಗೂ ನಗದು ಬಹುಮಾನ ಸ್ವೀಕರಿಸಿದರು

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮೈಸೂರು ಇವರ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.

ಪದವಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಜೆ.ಎಸ್.ಎಸ್ ಕಾಲೇಜಿನ ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಕುಸುಮಬಾಯಿ ಪ್ರಬಂಧ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ,ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ವಿಧ್ಯಾರ್ಥಿನಿಗೆ ಪ್ರಶಸ್ತಿ ಹಾಗೂ ನಗದು ಬಹುಮಾನ 11 ಸಾವಿರ ರೂಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಕೆ.ವಿ ತ್ರಿಲೋಕ ಚಂದ್ರ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್,ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!