Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಜ್ಯ ಸಭೆಯಲ್ಲಿ ಗ್ಯಾರಂಟಿಗಳ ನೈಜ ಸ್ಥಿತಿಗತಿ ಬಿಡಿಸಿಟ್ಟ ಮಾಜಿ ಪ್ರಧಾನಿ ದೇವೇಗೌಡರು

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸೋ ಕಾಲ್ಡ್ ಗ್ಯಾರಂಟಿಗಳಾಗಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ವಾಡಲಾಗುತ್ತಿದೆ ಎಂದು ವಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ವಾತನಾಡಿದ ಅವರು, ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದರು.

‘ಹಾವೇರಿ ಜಿಲ್ಲೆ ಆಲಗಚ್ಚು ಗ್ರಾಮದ ಯುವಕ ಕೆಲಸಕ್ಕಾಗಿ ತಾಯಿಯೊಂದಿಗೆ ರೈಲಿನಲ್ಲಿ ಪ್ರಾಂಣ ವಾಡುತ್ತಿರುತ್ತಾನೆ. ಟಿಕೆಟ್ ಇಲ್ಲದ ಕಾರಣಕ್ಕೆ ಅವರಿಬ್ಬರನ್ನು ಧಾರವಾಡದ ಬಳಿ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ವಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ’ ಎಂದು ಬೇಸರ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ: ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ವಾಡಿದ ದೇವೇಗೌಡ ಅವರು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟರಲ್ಲದೆ, ಕೇಂದ್ರ ಸರ್ಕಾರವು ೩೦ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ವಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ದಯಮಾಡಿ ಪ್ರಧಾನಿಗಳು ಮಧ್ಯಪ್ರವೇಶ ವಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಕೈ ಜೋಡಿಸಿ ಮನವಿಕೊಂಡರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ