Mysore
15
scattered clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ವಿಜಯೇಂದ್ರ, ಅಶೋಕ್

ಬೆಂಗಳೂರು: ಅತ್ತ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಕೇದ್ರ ಸರ್ಕಾರದ ವಿರುದ್ಧ ತೆರಿಗೆ ಅನುದಾನದ ತಾರತಮ್ಯದ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಸಿಎಂ ಸಿದ್ದರಾಮಯ್ಯ ಕಚೇರಿಗೆ ಬಿಜೆಪಿ ನಾಯಕರು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್‌ ಅಶೋಕ್‌ ಹಾಗೂ ಮುನಿರತ್ನ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು.

ಬಳಿಕ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಸ್‌ನಲ್ಲಿ ಕರೆದೊಯ್ದರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಯಿ ಸೇರಿದಂತೆ ಇನ್ನೂ ಮುಂತಾದ ಹಲವು ನಾಯಕರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!