Mysore
22
broken clouds
Light
Dark

ಉಚಿತ ಬಸ್‌ ಎಫೆಕ್ಟ್:‌ ಪ್ರವಾಸೋದ್ಯಮದಲ್ಲಿ ಕರ್ನಾಟಕ ಭರ್ಜರಿ ಜಂಪ್!

ಬೆಂಗಳೂರು: ಕರ್ನಾಟಕದಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಒಂದು ವರ್ಷದಲ್ಲಿ ಪ್ರಯಾಣಿಕರ ಸಂಖ್ಯೆ 10 ಕೋಟಿಯಷ್ಟು ಹೆಚ್ಚಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಪ್ರಯಾಣ ಯೋಜನೆ ವ್ಯವಸ್ಥೆಯೇ ಇದಕ್ಕೆ ಮೂಲ ಕಾರಣ ಎನ್ನಲಾಗಿದೆ.

ಕಳೆದ ಏಳು ವರ್ಷಗಳಲ್ಲಿ ದಾಖಲಾದ ಅತಿಹೆಚ್ಚು ಪ್ರವಾಸಿಗರ ಸಂಖ್ಯೆ ಇದಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಂಕಿಅಂಶದ ಪ್ರಕಾರ 2022ರಲ್ಲಿ ಪ್ರವಾಸಿಗರ ಸಂಖ್ಯೆ 18.27 ಕೋಟಿಯಷ್ಟಿತ್ತು. ಕೋವಿಡ್ ನಂತರ ದೊಡ್ಡ ಮಟ್ಟದಲ್ಲಿ ಕುಸಿದಿದ್ದ ಪ್ರಯಾಣಿಕರ ಸಂಖ್ಯೆ ಕರ್ನಾಟಕ ಸರ್ಕಾರವು ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ ಪರಿಣಾಮ ಈ ಬಾರಿ ಏರಿಕೆ ಕಂಡಿದೆ ಎನ್ನಬಹುದು. ರಾಜ್ಯಾದ್ಯಂತ 2023ರಲ್ಲಿ 28.45 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು, ಮಂಡ್ಯ, ಬೆಂಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಹಾಗೂ ಕೋಲಾರ ತಾಣಗಳಿಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚಳವಾಗಿದ್ದು, ಸರ್ಕಾರದ ಉಪಕ್ರಮಗಳು ಮತ್ತು ಪ್ರವಾಸೋದ್ಯಮಕ್ಕೆ ನೀಡಿದ ಉತ್ತೇಜನವೇ ಇದಕ್ಕೆ ಮೂಲ ಕಾರಣವಾಗಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಸಹಾಯ ಮಾಡಿ ರಾಜ್ಯದ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ನಿರ್ದೇಶಕ ಡಾ. ವಿ. ರಾಮ್ ಪ್ರಸಾದ್ ಮನೋಹರ್ ಅವರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ