Mysore
22
broken clouds
Light
Dark

ರಾಜ್ಯದಲ್ಲಿ ಹುಕ್ಕಾ ನಿಷೇಧಿಸಿ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ಹಾಗೂ ಅವುಗಳ ಪರವಾಗಿ ಜಾಹೀರಾತು, ಸೇವನೆಗೆ ಪ್ರಚೋದನೆ ನೀಡುವುದನ್ನು ನಿಷೇಧಿಸಿ ಆರೋಗ್ಯ ಇಲಾಖೆ ಇಂದು ( ಫೆಬ್ರವರಿ 7 ) ಆದೇಶ ಹೊರಡಿಸಿದೆ.

ಸಾರ್ವಜನಿಕರ ಆರೋಗ್ಯ ಕಾಪಾಡಲು ಸಂವಿಧಾನದ 47ನೇ ವಿಧಿಯಲ್ಲಿ ಸರ್ಕಾರಕ್ಕೆ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ತಂಬಾಕು ಹಾಗೂ ನಿಕೋಟಿನ್‌ ಒಳಗೊಂಡ ಹುಕ್ಕಾ, ತಂಬಾಕು ಹಾಗೂ ನಿಕೋಟಿನ್‌ ರಹಿತ ಹುಕ್ಕಾ, ಫ್ಲೇವರ್‌, ಮೊಲಾಸಿಸ್‌, ಶಿಶಾ ಇರುವ ಹೀಗೆ ಎಲ್ಲಾ ರೀತಿಯ ಹುಕ್ಕಾಗಳನ್ನೂ ಸಹ ನಿಷೇಧಿಸಲಾಗಿದೆ.

ಇನ್ನು ಈ ಆದೇಶವನ್ನು ಉಲ್ಲಂಘಿಸಿ ಹುಕ್ಕಾ ಸೇವನೆ ಮಾಡಿದರೆ ಅಂತಹವರ ವಿರುದ್ಧ ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಕಾಯ್ದೆ, ಮಕ್ಕಳ ಆರೈಕೆ ಮತ್ತು ರಕ್ಷಣ ಕಾಯ್ದೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕರ್ನಾಟಕ ವಿಷ ( ಸ್ವಾಧೀನ ಮತ್ತು ಮಾರಾಟ ) ಕಾಯ್ದೆ, ಭಾರತ ದಂಡ ಸಹಿತೆ ಹಾಗೂ ಅಗ್ನಿ ನಿಯಂತ್ರಣ ಮತ್ತು ಸುರಕ್ಷತಾ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಆದೇಶಿಸಿದೆ.

ವಿಶ್‌ ಆರೋಗ್ಯ ಸಂಸ್ಥೆ ಹುಕ್ಕಾವನ್ನು ವ್ಯಸನಕಾರಿ ಉತ್ಪನ್ನ ಎಂದಿದ್ದು, ಹುಕ್ಕಾ ಸೇವನೆ ಆರೋಗ್ಯಕ್ಕೆ ಹಾನಿಕರ, ಹುಕ್ಕಾ ಬಾರ್‌ಗಳು ಅಗ್ನಿ ಅನಾಹುತಕ್ಕೆ ಕಾರಣವಾಗುತ್ತಿವೆ. ಈ ಎಲ್ಲಾ ಕಾರಣಗಳಿಂದಾಗಿ ಹುಕ್ಕಾ ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ