Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಪರಶುರಾಮ ಪಾರ್ಕ್‌ ಅಕ್ರಮ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ

ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಭಾರೀ ಆರೋಪ ಕೇಳಿ ಬಂದ ಹಿನ್ನಲೆ ಪ್ರಕರಣವನ್ನು ಸಿಐಡಿ ತನಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಳರ್ ಅವರು ಫೆ.2 ರಂದು ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಜನರಿಂದ ಆರೋಪಗಳು ಕೇಳಿ ಬರುತ್ತಿತ್ತು. ಈ ಹಿನ್ನಲೆ ಸಚಿವೆ ಸರ್ಕಾರಕ್ಕೆ ಸಲ್ಲಿಸಿದ ಶಿಫಾರಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆದೇಶ ಹೊರಡಿಸಿದ್ದಾರೆ.

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ