Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮಾಂಸಾಹಾರ ಸೇವಿಸಿ ಸುತ್ತೂರು ಮಠಕ್ಕೆ ಸಿಎಂ ಭೇಟಿ: ಬಿಜೆಪಿ ದೂರಿಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಈ ಹಿಂದೆ ಮಾಂಸದ ಊಟ ಮಾಡಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ವಿವಾದಕ್ಕೆ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಅಂಥಹುದೇ ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್‌ ನಾಯಕರು ಮಾಂಸಾಹಾರ ಸೇವನೆ ಮಾಡಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ, ಸುತ್ತೂರು ಜಗದ್ಗುರುಗಳ ಗದ್ದುಗೆ ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಆರೋಪದ ಬಗ್ಗೆ ಮಾಧ್ಯಮಗಳು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಂ, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಕೇಳಬೇಡಿ. ಊಟ, ತಿಂಡಿ ತಿನ್ನೋದು, ಬಟ್ಟೆ ಹಾಕುವುದರ ಬಗ್ಗೆ ಮಾತಾಡಕ್ಕಾಗುತ್ತಾ? ಬಡವರ ಸಮಸ್ಯೆ ಹಾಗೂ ನಿರುದ್ಯೋಗ ಇದೆಲ್ಲ ಮಾತಾಡೋಣ. ಅದನ್ನು ಬಿಟ್ಟು ಮಾಂಸ ಸೇವಿಸಿ ಮಠಕ್ಕೆ ಭೇಟಿ ಹೀಗೆಲ್ಲಾ ಕೇಳಬೇಡಿ ಎಂದು ಗರಂ ಆದರು.

ಬಿಜೆಪಿ ಆರೋಪ ಹೀಗಿದೆ?
ಬುಧವಾರ ದೆಹಲಿಯಲ್ಲಿ ನಡೆದ ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ ನಂತರ ಸಿಎಂ ಸಿದ್ದರಾಮಯ್ಯ ಜಂತರ್ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು.

ಮಧ್ಯಾಹ್ನ ಮಾಂಸದ ಊಟ ಮಾಡಿ ಬಳಿಕ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬಂದಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್​ ಮೂಲಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಭಾಗವಹಿಸಿ ಗದ್ದುಗೆ ಭೇಟಿ ಮಾಡಿದ್ದು ಎಷ್ಟು ಸರಿ ಎಂದು ಬಿಜೆಪಿ ಆರೋಪ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ