ಕೊಲ್ಕತ್ತಾ : ಬಾಲಿವುಡ್ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಚಿತ್ರರಂಗದಲ್ಲಿ ಅಪಾರ ಸಾಧನೆಗೈದ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.