Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕಲಬುರಗಿ: ಸಂಸದ ಉಮೇಶ್​ ಜಾಧವ್ ಬೆಂಬಲಿಗನ ಹತ್ಯೆ!

ಕಲಬುರಗಿ : ಬಿಜೆಪಿ ಸಂಸದ ಡಾ. ಉಮೇಶ್​ ಜಾಧವ್ ಅವರ ಬೆಂಬಲಿಗನನ್ನು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್‌ಎನ್‌ಎಲ್‌ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು ಸಂಸದ ಉಮೇಶ್ ಜಾಧವ್ ನೇಮಕ ಮಾಡಿದ್ದರು. ಈ ಹಿನ್ನಲೆ ಗಿರೀಶ್‌ ಚಕ್ರ ಸ್ನೇಹಿತರು ಪಾರ್ಟಿ ಕೊಡುವುದಾಗಿ ನಂಬಿಸಿ ಜಮೀನಿಗೆ ಕರೆಸಿದ್ದರು.

ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ