Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ: ನಾಲ್ವರು ಶಂಕಿತರು ವಶಕ್ಕೆ!

ಬೆಂಗಳೂರು: ಇಲ್ಲಿನ ಕುಂದಲಹಳ್ಳಿಯ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ (ಶುಕ್ರವಾರ) ಸಂಭವಿಸಿದ ಬಾಂಬ್‌ ಸ್ಪೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮದ್ಯಾಹ್ನ ಊಟದ ಸಮಯದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಪ್ರಕರಣದಲ್ಲಿ ಒಂಭತ್ತು ಮಂದಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ.

ಸ್ಫೋಟ ಪ್ರಕರಣ ಬೆಳಕಿಗೆ ಬಂದಂತೆ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್‌ ಇಲಾಖೆ ರಾತ್ರಿಯಿಡಿ ತೀವ್ರ ತಪಾಸಣೆ ನಡೆಸಿದ್ದಾರೆ. ತಮಗೆ ಸಿಕ್ಕ ಎಲ್ಲಾ ಮಾಹಿತಿಗಳನ್ನು ಕೆಲಹಾಕಿ, ಅದರ ಜಾಡು ಹಿಡಿದು, ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮದ್ಯಾಹ್ನ 1 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸದ್ಯ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರಿಗೆ ತೆರಳಿದ ನಂತರ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಇದರಲ್ಲಿ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಕುಮಾರ್‌, ಪೊಲೀಸ್‌ ಆಯುಕ್ತ ದಯಾನಂದ್‌ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!