Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಉಗ್ರರ ಬಗ್ಗೆ ಕಾಂಗ್ರೆಸ್‌ನ ಸಹಾನುಭೂತಿ ಮನೋಭಾವ ಆತಂಕಕಾರಿ : ಅಶೋಕ್‌ ಆಕ್ರೋಶ

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ.

ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ “ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ.

ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ, ದುಷ್ಕೃತ್ಯಗಳನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಸಲಾಗಿದೆ. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ನಿರತವಾಗಿರುವ ಕಾಂಗ್ರೆಸ್‌ ಸರಕಾರ ಇಂತಹ ಕೃತ್ಯಗಳಲ್ಲೂ ಕೀಳು ಮನೋಭಾವ ಪ್ರದರ್ಶಿಸುತ್ತಿರುವುದು ರಾಜ್ಯದ ಜನತೆಯಲ್ಲಿ ಆಘಾತವುಂಟು ಮಾಡಿದೆ ಎಂದು ಕಿಡಿಕಾರಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ