Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬಂಡೀಪುರ ಮಡಿಲಿಗೆ ʼಅತ್ಯುತ್ತಮ ವನ್ಯಧಾಮ ಪ್ರಶಸ್ತಿʼ

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ ಎಂದು ಎಂಬ ಹಿರಿಮೆಗೆ ಪಾತ್ರವಾಗಿದೆ.

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ವೈಲ್ಡ್ ಲೈಫ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವೆರ್ನ್ಸೆಂಟ್ ಆ್ಯಂಡ್ ಫಾರೆಸ್ಟ್ ಸಂಸ್ಥೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಸಮೀಕ್ಷೆ ನಡೆಸುತ್ತದೆ.

ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆದಿದ್ದು, ಪ್ರಸಕ್ತ ಸಾಲಿನ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಬಾರಿ ಅತ್ಯುತ್ತಮ ವನ್ಯಧಾಮ ಎಂಬ ಪ್ರಶಸ್ತಿ ಸಂದಿದೆ.

ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ