Mysore
20
overcast clouds

Social Media

ಶನಿವಾರ, 03 ಜನವರಿ 2026
Light
Dark

ಎಂ.ಎಸ್‌.ಸತ್ಯುಗೆ ಜೀವಮಾನ ಸಾಧನೆ ಪ್ರಶಸ್ತಿ !

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್‌ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.

ಎಂಎಸ್‌ ಸತ್ಯು ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.

ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ.

“ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!