Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜವಂಶಸ್ಥರು ರಾಜಕೀಯಕ್ಕೆ ಬರುವುದಾದರೆ ಸ್ವಾಗತ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಮೈಸೂರಿನ ರಾಜವಂಶಸ್ಥರಾದ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ರಾಜಕೀಯಕ್ಕೆ ಬರುವುದಾದರೇ ನನ್ನ ಸ್ವಾಗತವಿದೆ ಎಂದು ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಅರಮನೆಯಿಂದ ಬೀದಿಗೆ ಬಂದು ಜನರ ಕಷ್ಟಗಳಿಗೆ ಸ್ಪಂದಿಸಿದರೇ ನಾನು ಒಬ್ಬ ಕಾರ್ಯಕರ್ತನಾಗಿ ಅವರೊಂದಿಗೆ ನಿಂತು ಕೆಲಸ ಮಾಡುತ್ತೇನೆ. ಅರಮನೆಯಲ್ಲಿ ಎಸಿ ವ್ಯವಸ್ಥೆಯೊಳಗಿದ್ದು, ಬೀದಿಗೆ ಬಂದು ಜನರೊಂದಿಗೆ ಬೆರೆಯುವುದಾದರೆ ನನಗೆ ಸಂತೋಷವಿದೆ.

ಯದುವೀರ್‌ ಅವರ ರಾಜಕೀಯ ಪ್ರವೇಶದಿಂದ ರಾಜವಂಶಸ್ಥರು ಮತ್ತು ಸರ್ಕಾರದ ನಡುವಿನ ವ್ಯಾಜ್ಯಗಳು ಇತ್ಯರ್ಥವಾಗುತ್ತದೆ. ಜನರ ಎಲ್ಲಾ ಕಷ್ಟಗಳು ಬಗೆ ಹರಿಯುತ್ತದೆ ಎಂದು ಹೇಳುವ ಮೂಲಕ ಯದುವೀರ್‌ ಅವರ ರಾಜಕೀಯ ಪ್ರವೇಶ ಕುರಿತು ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಈ ಹಿಂದೆ ಚಾಮುಂಡಿಬೆಟ್ಟಕ್ಕೆ ಹೊಸ ಪೈಪ್ ಲೈನ್ ಆಗಲು ಪ್ರಮೋದಾದೇವಿ ಒಡೆಯರ್ ಬಿಟ್ಟಿರಲಿಲ್ಲ. ಮುಂದೆ ಹೊಸ ಪೈಪ್ ಲೈನ್ ಆಗುತ್ತೆ. ಮೈಸೂರಿನ ಲಲಿತ ಮಹಲ್ ಅರಮನೆ, ಸಮೀಪದ ಹೆಲಿಪ್ಯಾಡ್ ಜಾಗ, ಸರ್ವೇ ನಂಬರ್ 4ರ ಸುಮಾರು 1200 ಎಕರೆ ಜಾಗ, ವಿಜಯಶ್ರೀಪುರದ ಮನೆಗಳು, ವಸ್ತು ಪ್ರದರ್ಶನ ಪ್ರಾಧಿಕಾರದ ಜಾಗ ಎಲ್ಲದರ ಬಗ್ಗೆ ವ್ಯಾಜ್ಯಗಳು ಇವೆ. ಯದುವೀರ್ ಜನಪ್ರತಿನಿಧಿಯಾದರೆ ಆ ಎಲ್ಲ ಜಾಗವನ್ನೂ ಜನರಿಗೆ ಬಿಟ್ಟು ಕೊಡಬೇಕಾಗುತ್ತೆದೆ. ಕ್ಷೇತ್ರದ ಹಿತದೃಷ್ಠಿಯಿಂದ ಯದುವೀರ್ ಅವರ ರಾಜಕೀಯ ಪ್ರವೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮೈಸೂರಿನಲ್ಲಿಂದು ಹೇಳಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ