Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಲೋಕ ಚುನಾವಣೆ: ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್‌ ಸಿಂಹ ಫಸ್ಟ್‌ ರಿಯಾಕ್ಷನ್‌!

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ. ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣೆ ಎದುರಿಸಲಲಿದ್ದಾರೆ.

ಈ ಬೆನ್ನಲ್ಲೇ ಕೊಡಗು-ಮೈಸೂರು ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಟಿಕೆಟ್‌ ಗಿಟ್ಟಿಸಿಕೊಳ್ಳುವ ಆಶಯದಲ್ಲಿದ್ದ ಸಂಸದ ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿದ್ದು, ಕ್ಷೇತ್ರದ ಜನರಿಗೆ ಸಂದೇಶ ನೀಡಿದ್ದಾರೆ.

ಪ್ರತಾಪ್‌ ಸಿಂಹ ತಮ್ಮ ಟ್ವಿಟ್ಟರ್‌ನಲ್ಲಿ Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಬರೆದುಕೊಂಡಿದ್ದಾರೆ.

ಆ ಮೂಲಕ ನಾನೊಬ್ಬ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ದವಿರುವುದಾಗಿ ಸಂಸದ ಪ್ರತಾಪ್‌ ಸಿಂಹ ಹೇಳಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!