ನವದೆಹಲಿ: ಒಂದು ದೇಶ ಒಂದು ಚುನಾವಣೆ ಕುರಿತಾಗಿ ರಚಿಸಲಾಗಿದ್ದು ಉನ್ನತ ಸಮಿತಿಯು 62 ಪಕ್ಷಗಳ ಅಭಿಪ್ರಾಯಗಳನ್ನು ಕೇಳಿದ್ದು, ಈ ಪೈಕಿ 47 ಪಕ್ಷಗಳು ಪ್ರತಿಕ್ರಿಯಿಸಿವೆ.
ಇದರಲ್ಲಿ 32 ಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ಜೈ ಎಂದಿದ್ದು, 15 ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇನ್ನು ಉಳಿದ 15 ಪಕ್ಷಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ಭಾರತೀಯ ಕಮ್ಯೂನಿಸ್ಟ್ ಪಕ್ಷ ಸೇರಿದಂತೆ ಇನ್ನೂ ಕೆಲ ಮುಂತಾದ ರಾಷ್ಟ್ರೀಯ ಪಕ್ಷಗಳು ಒಂದು ರಾಷ್ಟ್ರ ಒಂದು ಚುನಾವಣೆಗೆ ವಿರೋಧ ವ್ಯಕ್ತಪಡಿಸಿದ್ದರೆ, ಭಾರತೀಯ ಜನತಾ ಪಕ್ಷ ಹಾಗೂ ನ್ಯಾಷನಲ್ ಪೀಪಲ್ಸ್ ಪಾರ್ಟಿ ಇದಕ್ಕೆ ಸಹಮತ ಸಲ್ಲಿಸಿವೆ.





