ಮೈಸೂರು: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಆಭವಾಗಿದ್ದು, ಬಿಜೆಪಿಯಿಂದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯ ಡಾ.ಮೋಹನ್ ಸಿದ್ದರಾಮಯ್ಯರ ನಿವಾಸಕ್ಕೆ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಅನಿಲ್ ಚಿಕ್ಕಮಾದು ಹಾಗೂ ಬಿಜೆಪಿಯ ಮಾಜಿ ಸಚಿವ ಕೋಟೆ ಶಿವಣ್ಣ ಜೊತೆಯಲ್ಲಿ ಸಿಎಂ ಮನೆಗೆ ಭೇಟಿ ನೀಡಿದ ಡಾ.ಮೋಹನ್ ಕೆಲಕಾಲ ಚುನಾವಣಾ ಸಂಬಂಧ ಮಾತುಕತೆ ನಡೆಸಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಡಾ ಮೋಹನ್ ತೆರಳಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.