Mysore
26
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ : ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಬಿಜೆಪಿ ಪಕ್ಷದಿಂದ ತಮ್ಮ ಮಗ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಿದ ಹಿನ್ನಲೆ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಎಲ್ಲ ಬೆಂಬಲಿಗರ ವತ್ತಾಯದ ಮೇರೆಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನನ್ನ ಮಗನಿಗೆ ಲೋಕಸಭಾ ಚುನಾವಣೆಯ ಟಿಕೆಟ್‌ ಕೊಡಿಸಿ, ತಾವೆ ಬಂದು ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದಿದ್ದರು. ಆದರೆ ತಮ್ಮ ಮಾತಿಗೆ ತಪ್ಪುವ ಮೂಲಕ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಟಿಕೆಟ್‌ ಕೊಡಿಸುವ ಮೂಲಕ ನಮಗೆ ಮೋಸ ಮಾಡಿದ್ದಾರೆ. ಇದರಿಂದಾಗಿ ನಮ್ಮ ಬೆಂಬಲಿಗರು ಮನ ನೊಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸೂಚಿಸಿದ್ದಾರೆ. ಹೀಗಾಗಿ ಅವರ ಒತ್ತಾಯದ ಮೇರೆಗೆ ಶಿವಮೊಗ್ಗದಿಂದ ನಾನೇ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ರಕ್ತದ ಕಣ ಕಣದಲ್ಲಿ ಬಿಜೆಪಿ : ಯಾವುದೇ ಕಾರಣಕ್ಕು ನಾನು ಪಕ್ಷಕ್ಕೆ ದ್ರೋಹ ಮಾಡುತ್ತಿಲ್ಲ, ಮಾಡುವುದೂ ಇಲ್ಲ. ನನ್ನ ರಕ್ತದ ಕಣ-ಕಣದಲ್ಲೂ ಬಿಜೆಪಿ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀರಾಮನನ್ನ ಬಿಡುವ ಪ್ರಶ್ನೆಯೇ ಇಲ್ಲ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

Tags: