Mysore
29
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಲೋಕಸಭಾ ಚುನಾವಣೆ: ರಾಜ್ಯ ಮತದಾರರ ಮಾಹಿತಿ ಇಲ್ಲಿದೆ ನೋಡಿ!

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ನಡೆಯುತ್ತದೆ.

ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಮೇ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 5,42,08,088 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 2,71,21,407 ಕೋಟಿ ಇದ್ದರೇ, ಮಹಿಳೆಯರು 2,70,81,748 ಕೋಟಿ ಇದ್ದಾರೆ. ತೃತೀಯ ಲಿಂಗಿಗಳ ಸಂಖ್ಯೆ 4,933 ಮತದಾರರು ಇದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಅರ್ಜಿ ಸಲ್ಲಿಕೆ ವಿವರ:

ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಮಾರ್ಚ್‌ 28
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್‌ 4
ನಾಮಪತ್ರ ಪರಿಶೀಲನೆ: ಏಪ್ರಿಲ್‌ 5
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್‌ 8 ವರೆಗೆ ಇರಲಿದೆ.

ಎರಡನೇ ಹಂತದ ಮತದಾನಕ್ಕೆ ಅರ್ಜಿ ಸಲ್ಲಿಕೆ ವಿವರ:

ನಾಮಪತ್ರ ಸಲ್ಲಿಕೆ ಆರಂಭ ದಿನಾಂಕ: ಏಪ್ರಿಲ್‌ 12
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್‌ 19
ನಾಮಪತ್ರ ಪರಿಶೀಲನೆ: ಏಪ್ರಿಲ್‌ 20
ನಾಮಪತ್ರ ವಾಪಾಸಾತಿ ಗಡುವು: ಏಪ್ರಿಲ್‌ 22 ವರೆಗೆ ಇರಲಿದೆ.

Tags:
error: Content is protected !!